ಬಿಪಿಎಲ್ ಕಾರ್ಡ್ ಹೊಂದಿದವರಿಗೆ 2 ಸಾವಿರ ರೂ. ಪರಿಹಾರ ಧನ | ಯಾವ ರಾಜ್ಯದಲ್ಲಿ ಗೊತ್ತಾ?
07/05/2021
ಚೆನ್ನೈ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಗಳಿಗೆ ರೂ.2 ಸಾವಿರ ಪರಿಹಾರ ನೀಡುವುದಾಗಿ ತಮಿಳುನಾಡಿನ ನೂತನ ಸಿಎಂ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ.
ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಈ ಘೋಷಣೆ ಮಾಡಿರುವ ಸ್ಟಾಲಿನ್, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಕೊರೊನಾ ಸಂಕಷ್ಟದ ಪರಿಹಾರವಾಗಿ 2 ಸಾವಿರ ರೂಪಾಯಿಗಳನ್ನು ಪರಿಹಾರ ಧನವಾಗಿ ನೀಡಲಾಗುವುದು ಎಂದು ಅವರು ಹೇಳಿದರು.
2.07 ಕೋಟಿ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದು, ಇದಕ್ಕಾಗಿ ಸರ್ಕಾರವು ಒಟ್ಟು 4,153.39 ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರು ತಿಳಿಸಿದರು.
ಚುನಾವಣೆಯಲ್ಲಿ ತಾವು ಗೆದ್ದರೆ, ಪ್ರತಿ ಕುಟುಂಬಕ್ಕೆ ಕೊರೊನಾ ಪರಿಹಾರವಾಗಿ 4 ಸಾವಿರ ರೂಪಾಯಿಗಳನ್ನು ನೀಡುವುದಾಗಿ ಸ್ಟಾಲಿನ್ ಘೋಷಿಸಿದ್ದರು. ಆದರೆ ಇದೀಗ ಮೊದಲ ಕಂತಿನಲ್ಲಿ 2 ಸಾವಿರ ರೂಪಾಯಿಗಳನ್ನು ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.