ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ: ಕೆ.ಎಚ್. ಮುನಿಯಪ್ಪ - Mahanayaka
10:33 PM Tuesday 10 - December 2024

ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ: ಕೆ.ಎಚ್. ಮುನಿಯಪ್ಪ

muniyappa
10/12/2024

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ, ಎಪಿಎಲ್ ಕಾರ್ಡ್ ಗೆ ಪರಿಷ್ಕರಣೆ ಮಾಡಲಾಗುವುದು ಅಂತ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ವಿಧಾನಪರಿಷತ್ ನಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಕೆ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಲಕ್ಷದ 20 ಸಾವಿರಕ್ಕಿಂತ ಅಧಿಕ ಆದಾಯ, ತೆರಿಗೆ ಪಾವತಿಸುತ್ತಿರುವವರ ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಆಹಾರ ಭದ್ರತಾ ಕಾಯ್ದೆಯನ್ವಯ ಅಂತ್ಯೋದಯ ಪಡಿತರ ಚೀಟಿಗೆ ತಲಾ 35 ಕೆಜಿ ಅಕ್ಕಿ ಮತ್ತು ಆದ್ಯತಾ ಪಡಿತರ ಚೀಟಿಗೆ ಪ್ರತಿ ವ್ಯಕ್ತಿಗೆ 5 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ ಎಂದರು.

2022ರ ಡಿಸೆಂಬರ್ ಮಾಹೆಯಲ್ಲಿ 3 ಕೆ.ಜಿ. ಅಕ್ಕಿ ಮತ್ತು 2 ಕೆ.ಜಿ. ರಾಗಿ ಕೊಡಲಾಗುತ್ತಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 1 ಕೋಟಿ 2 ಲಕ್ಷ ಕುಟುಂಬಗಳಿಗೆ 5 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ