ರಸ್ತೆದಾಟಲು ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಜೀಪು: ಮಹಿಳೆ ಸಾವು
ಬ್ರಹ್ಮಾವರ: ಉಪ್ಪೂರು ಗ್ರಾಮದ ಕೆ.ಜಿ.ರೋಡ್ ನ ರಾ.ಹೆ-66ರಲ್ಲಿ ಇಂದು ಬೆಳಗ್ಗೆ ಮಹೀಂದ್ರ ಬುಲೆರೋ ಜೀಪೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೆ.ಜಿ.ರೋಡ್ ನಿವಾಸಿ ಜಯಲಕ್ಷ್ಮೀ ಭಟ್ ಎಂದು ಗುರುತಿಸ ಲಾಗಿದೆ. ಇವರು ಬ್ರಹ್ಮಾವರ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬುಲೆರೋ ಜೀಪು ಡಿಕ್ಕಿ ಹೊಡೆಯಿತು.
ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw