ಬ್ರಾಹ್ಮಣ, ಬನಿಯಾಗಳು ಕ್ಯಾಂಪಸ್ ಬಿಟ್ಟು ತೊಲಗಿ: ಮತ್ತೆ ವಿವಾದಕ್ಕೆ ಕಾರಣವಾದ ಜೆಎನ್ ಯು
ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಕ್ಯಾಂಪಸ್ ಆವರಣದಲ್ಲಿನ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜೆಎನ್ ಯು ಆಡಳಿತ ಸಲಹೆ ನೀಡಿದೆ.
ಸ್ಕೂಲ್ ಆಫ್ ಇಂಟರ್‌ನ್ಯಾಷನಲ್ ಸ್ಟಡೀಸ್- 2 ರ ಕಟ್ಟಡದ ಗೋಡೆಗಳಲ್ಲಿ ಬ್ರಾಹ್ಮಣ ಹಾಗೂ ಬನಿಯಾ ವಿರೋಧಿ ಬರಹಗಳನ್ನು ಬರೆಯಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.
ಬ್ರಾಹ್ಮಣ ಮತ್ತು ಬನಿಯಾ ಸಮುದಾಯಕ್ಕೆ ಸೇರಿದವರು ಕ್ಯಾಂಪಸ್ ಬಿಟ್ಟು ತೊಲಗಿ ಎಂದು ಗೋಡೆ ಮೇಲಿನ ಬರಹಗಳಲ್ಲಿ ಎಚ್ಚರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಜೆಎನ್‌ಯು ಆಡಳಿತವು ಕಾಲೇಜು ಕ್ಯಾಂಪಸ್ ಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲು ಸೂಚಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka