ಎಕ್ಸ್ ಪ್ರೆಸ್ ವೇನಲ್ಲಿ ಬ್ರೇಕ್ ಫೈಲ್: 12 ಕಾರುಗಳಿಗೆ ಡಿಕ್ಕಿ ಹೊಡೆದ ಟ್ರಕ್
ಮುಂಬೈ: ಟ್ರಕ್ ವೊಂದು ಬ್ರೇಕ್ ಫೈಲ್ ಆದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು 12 ಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮುಂಬೈ—ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಗುರುವಾರ ನಡೆದಿದೆ.
ಘಟನೆಯಲ್ಲಿ 12 ವಾಹನಗಳು ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.
ಮಹಾರಾಷ್ಟ್ರದ ಖೋಪೋಲಿ ಬಳಿ ಈ ಅಪಘಾತ ಸಂಭವಿಸಿದೆ. ಎಕ್ಸ್ ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ವೇಳೆ ಟ್ರಕ್ ನ ಬ್ರೇಕ್ ಫೈಲ್ ಆಗಿದೆ. ಪರಿಣಾಮವಾಗಿ 12 ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ 7—8 ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ. ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw