Breaking News | ಸುರತ್ಕಲ್ ನಲ್ಲಿ ಮತ್ತೊಂದು ಬರ್ಬರ ಹತ್ಯೆ
ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ರಾತ್ರಿ ನಡೆದಿದೆ.
ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮೃತ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ.
ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದೆ. ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡ ಜಲೀಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw