ವರನ ಎದುರೇ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ!: 8 ಮಂದಿ ಅರೆಸ್ಟ್

ಉತ್ತರ ಪ್ರದೇಶ: ಮದುವೆಗೆ ಕೆಲವೇ ದಿನಗಳು ಬಾಕಿ ಇದ್ದ ವೇಳೆ, ವರನ ಎದುರೇ ವಧುವಿನ ಮೇಲೆ 8 ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾಸ್ಗಂಜ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ತ್ವರಿತವಾಗಿ ತನಿಖೆ ಕೈಗೊಂಡ ಉತ್ತರಪ್ರದೇಶ ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.
ಏಪ್ರಿಲ್ 10ರಂದು ಈ ಘಟನೆ ನಡೆದಿದೆ. ಮಧ್ಯಾಹ್ನ 2:30ರ ಸುಮಾರಿಗೆ ರಸ್ತೆ ಬದಿಯ ಕಾಲುವೆ ಬಳಿ ವಧು ಹಾಗೂ ವರ ಮಾತನಾಡುತ್ತಿದ್ದರು. ಇದೇ ವೇಳೆ ಇವರನ್ನು ಗಮನಿಸಿದ ಯುವಕರ ಗುಂಪು, ವರನನ್ನು ಒತ್ತೆಯಾಳಾಗಿಟ್ಟುಕೊಂಡು ಆತನ ಎದುರೇ ವಧುವಿನ ಮೇಲೆ ಒಬ್ಬರಾದ ನಂತರ ಒಬ್ಬರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ, ಅತ್ಯಾಚಾರದ ಬಳಿಕ ಜೋಡಿಯ ಬಳಿಯಿದ್ದ ಹಣವನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಲು ಯೋಜಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: