ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಗೆ ಸಾಧು ಸಂತರ ಬೆಂಬಲದ ನಡುವೆಯೇ ಬಿಗ್ ಶಾಕ್!

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ ಇದೀಗ ಕುಸ್ತಿ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕುತ್ತಿಗೆಗೆ ಬಲವಾಗಿ ಸುತ್ತಿಕೊಂಡಿದೆ. ಕುಸ್ತಿಪಟುಗಳು ಪಟ್ಟು ಸಡಿಲಿಸದೇ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ದಿನಕ್ಕೊಂದು ವಿನೂತನ ಪ್ರತಿಭಟನೆಯ ಮೂಲಕ ಈ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಇತ್ತ ಕುಸ್ತಿಪಟುಗಳ ಬಿಗಿಪಟ್ಟಿನಿಂದ ತಪ್ಪಿಸಿಕೊಳ್ಳಲು ಬ್ರಿಜ್ ಭೂಷಣ್ ಶರಣ್ ಸಿಂಗ್ ಅಯೋಧ್ಯೆಯಲ್ಲಿ ತನ್ನ ಬೆಂಬಲಿಗರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಸಾಧು ಸಂತರ ಬೆಂಬಲದೊಂದಿಗೆ ತನ್ನ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಲು ಮುಂದಾಗಿದ್ದು, ಆದರೆ, ಇದು ಕೇಂದ್ರ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸರ್ಕಾರಿ ತಡೆ ಹಾಕಿದ್ದು, ಕೆಲವು ದಿನಗಳ ಕಾಲ ಶಕ್ತಿ ಪ್ರದರ್ಶನ ಮುಂದೂಡಲಾಗಿದೆ.
ಉತ್ತರ ಪ್ರದೇಶದ ಕೈಸರ್ ಗಂಜ್ ನ ಬಿಜೆಪಿ ಸಂಸದನಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಸೋಮವಾರ ಸಾಧು ಸಂತರೊಂದಿಗೆ ರಾಲಿ ನಡೆಸುವುದಾಗಿ ಘೋಷಿಸಿಕೊಂಡಿದ್ದರು. ಇದು ಇಡೀ ದೇಶದಲ್ಲೇ ಆಕ್ರೋಶಕ್ಕೆ ಕಾರಣವಾಗಿತ್ತು. ಲೈಂಗಿಕ ಕಿರುಕುಳ ಪ್ರಕರಣದ ವ್ಯಕ್ತಯೋರ್ವನಿಗೆ ಸಾಧು ಸಂತರು ಯಾವ ನೈತಿಕತೆಯಿಂದ ಬೆಂಬಲ ಸೂಚಿಸುತ್ತಾರೆ? ರಾಮನ ನಾಡಿನಲ್ಲಿ ತೋರುವ ನೈತಿಕತೆ ಇದೇನಾ ಎನ್ನುವ ಆಕ್ರೋಶಗಳು ವ್ಯಾಪಕವಾಗಿ ಕೇಳಿ ಬಂದಿದ್ದವು.
ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಕೊಟ್ಟ ಕಿರುಕುಳ ಏನು?
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ಪ್ರಕಾರ, ಮಹಿಳಾ ಅಥ್ಲೀಟ್ ಗಳ ಉಸಿರಾಟ ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಮತ್ತು ಅಥ್ಲೀಟ್ ಅಲ್ಲಿಯೇ ನಿಲ್ಲಿಸಿ ವೈಯಕ್ತಿಕ ಪ್ರಶ್ನೆಗಳನ್ನು ಕೇಳುವುದು ಮತ್ತು ಲೈಂಗಿಕತೆಗೆ ಆಹ್ವಾನಿಸಿ ಒತ್ತಾಯಿಸುತ್ತಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw