ಬಾರ್ ನಲ್ಲಿ ಕೆಲಸ ಮಾಡುತ್ತಿದ್ದವನ ಮೇಲೆ ತಂಡದಿಂದ ಹಲ್ಲೆ
27/02/2021
ಉಳ್ಳಾಲ: ವ್ಯಕ್ತಿಯೋರ್ವನ ಮೇಲೆ ಐದು ಮಂದಿ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು, ಹಳೆಯ ದ್ವೇಷದಿಂದ ಈ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷ ವಯಸ್ಸಿನ ಶಿವರಾಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಯ ಪರಿಣಾಮ ಅವರು ಗಾಯಗೊಂಡಿದ್ದಾರೆ.
ಬಾರ್ ನಲ್ಲಿ ಕೆಲಸ ಮಾಡುವುದಕ್ಕೂ ಮೊದಲು ಬಸ್ಸೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕುಂಜತ್ತಬೈಲು ಮೂಲದವರು ಹಲ್ಲೆ ನಡೆಸಿದ ದುಷ್ಕರ್ಮಿಗಳು ಎಂದು ತಿಳಿದು ಬಂದಿದೆ.
ಹಳೆಯ ದ್ವೇಷವೇ ಈ ಹಲ್ಲೆಗೆ ಕಾರಣ ಎಂದು ಹೇಳಲಾಗಿದೆ. ಘಟನೆ ಸಂಬಂಧ ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.