ಕೈ ಪಾಳಯ ಸೇರಿದ ಬಿಆರ್ ಎಸ್ ನಾಯಕರು: ಹಸ್ತ ಪಡೆಗೆ ಮತ್ತಷ್ಟು ಬಲ

03/08/2023

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ
ಭಾರತ್ ರಾಷ್ಟ್ರ ಸಮಿತಿ (ಬಿ.ಆರ್.ಎಸ್) ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.

ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್‌ ಗೆ ಸ್ವಲ್ಪ ಬಲ ಬದಂತಾಗಿದೆ. ಕೆ.ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷಕ್ಕೆ ತೆಲಂಗಾಣದ ಹಲವು ಪ್ರಮುಖ ನಾಯಕರನ್ನು ಸ್ವಾಗತಿಸುತ್ತೇವೆ. ತೆಲಂಗಾಣದ ಪ್ರಗತಿ ಮತ್ತು ಸಮೃದ್ಧಿಗಾಗಿ ಆ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರ ಚುಕ್ಕಾಣಿ ಹಿಡಿಯಲು ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version