BSPಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು | ಕಾರ್ಯಕರ್ತರ ಸಮಾವೇಶದಲ್ಲಿ ರಾಮ್ಜೀ ಗೌತಮ್ ಕರೆ - Mahanayaka

BSPಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು | ಕಾರ್ಯಕರ್ತರ ಸಮಾವೇಶದಲ್ಲಿ ರಾಮ್ಜೀ ಗೌತಮ್ ಕರೆ

bsp kalaburgi
01/10/2021

ಕಲಬುರ್ಗಿ: ದೇಶದ ಅಭಿವೃದ್ಧಿ ದೃಷ್ಟಿಯಿಂದ ಬಿಎಸ್ಪಿಗೆ ಅಧಿಕಾರ ನೀಡುವುದು ಮುಖ್ಯ. ರಾಜ್ಯದಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಕಾರ್ಯಕರ್ತರು ಸಿದ್ಧರಾಗಬೇಕು. ಮುಂಬರುವ ವಿಭಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ರಾಜ್ಯಸಭಾ ಸದಸ್ಯ, ಪಕ್ಷದ ರಾಷ್ಟ್ರೀಯ ಸಂಯೋಜಕ ರಾಮ್ಜೀ ಗೌತಮ್ ಹೇಳಿದರು.

ಬಹುಜನ ಸಮಾಜ ಪಕ್ಷದ (BSP) ವತಿಯಿಂದ ಗುರುವಾರ ನಗರದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, 2022ರಿಂದ 2024ರವರೆಗೆ ದೇಶದಲ್ಲಿ ಅಧಿಕಾರಕ್ಕಾಗಿ ಮಹಾಸಂಗ್ರಾಮ ನಡೆಯಲಿದೆ. ಕರ್ನಾಟಕದಿಂದ ಹೆಚ್ಚು ಜನರನ್ನು ಸಂಸತ್ ಗೆ ಕಳಿಸುವ ಮೂಲಕ ಮಾಯಾವತಿ ಅವರ ಕೈಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಸಮರ್ಪಕವಾಗಿ ಜಾರಿ ಆಗಿದ್ದರೆ ದೇಶದಲ್ಲಿ ಬಡತನ, ಅಸಮಾನತೆ ಇರುತ್ತಿರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಪರಿಶಿಷ್ಟ ಜಾತಿಯ ಜನರ ಬದುಕು ಬದಲಾಗಿಲ್ಲ. ಅವರ ಮೇಲಿನ ದೌರ್ಜನ್ಯಗಳು ನಿಂತಿಲ್ಲ. ಬಿಎಸ್ಪಿಗೆ ಅಧಿಕಾರ ನೀಡಿದರೆ ಯಾವ ರೀತಿ ಅಭಿವೃದ್ಧಿ ಮಾಡಬಹುದು ಎಂಬುದನ್ನು ಮಾಯಾವತಿ ಅವರು ಉತ್ತರ ಪ್ರದೇಶದಲ್ಲಿ ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿ ಸುರೇಂದ್ರಸಿಂಗ್ ಕಲೋರಿಯಾ, ರಾಜ್ಯ ಉಸ್ತುವಾರಿ ದಿನೇಶ ಗೌತಮ, ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ವಾಸು, ಪ್ರಧಾನ ಕಾರ್ಯದರ್ಶಿ ಮಹಾದೇವ ಬಿ.ಧನ್ನಿ, ರಾಜ್ಯ ಘಟಕದ ಕಾರ್ಯದರ್ಶಿ ಎಲ್.ಆರ್.ಬೊಸ್ಲೆ, ಸೂರ್ಯಕಾಂತ ನಿಂಬಾಳ್ಕರ್, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ, ಮೈಲಾರಿ ಶೆಳ್ಳಗಿ, ಜೈಭೀಮ ಶಿಂದೆ, ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಸುಗೂರ, ಉಪಾಧ್ಯಕ್ಷರಾದ ಮಶಾಕ್ ಪಟೇಲ್, ಮಂಜುನಾಥ ನಾಲವಾರಕರ್, ಪ್ರಧಾನ ಕಾರ್ಯದರ್ಶಿ ಗೋರಖನಾತ ದೊಡ್ಡಮನಿ, ಯಲ್ಲಪ್ಪ ಛಲವಾದಿ, ರಾಜೇಂದ್ರ ದಂಡೋತಿಕರ್ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸೊಸೆಗೆ ಚಾಕುವಿನಿಂದ ಚುಚ್ಚಿದ ಅತ್ತೆ: ಸೊಸೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಅತ್ತೆ ನೇಣಿಗೆ ಶರಣು

ಕೂದಲು ಉದುರುವಿಕೆ, ಎದೆ ಉರಿ ಸೇರಿದಂತೆ ಹಲವು ರೋಗಗಳ ನಿವಾರಣೆ ಅಲೋವೆರಾ ಉತ್ತಮ

ಅರ್ಚಕನ ಮಾದಕ ಜಾಲ ಬಯಲು: ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕ ಅರೆಸ್ಟ್

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ತಮ್ಮ ಮುಂದಿನ ನಡೆ ಏನು ಎಂದು ಸ್ಪಷ್ಟಪಡಿಸಿದ ಪಂಜಾಬ್ ನ ಮಾಜಿ ಸಿಎಂ ಅಮರೀಂದರ್ ಸಿಂಗ್!

ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಮೆರವಣಿಗೆ!

ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲ್ಲ ಅನ್ನೋದು ಅಸತ್ಯ, ಭಟ್ಟಂಗಿತನ: ಕನ್ಹಯ್ಯ ಕುಮಾರ್ ವಿರುದ್ಧ ನಟ ಚೇತನ್ ಆಕ್ರೋಶ

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

 

ಇತ್ತೀಚಿನ ಸುದ್ದಿ