ಬಿಎಸ್ ಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ! - Mahanayaka
3:19 AM Wednesday 5 - February 2025

ಬಿಎಸ್ ಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ!

16/02/2021

ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯ  ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖಂಡರೋರ್ವರನ್ನು ಗುಂಡು ಹಾರಿಸಿ ಹತ್ಯೆ ನಡೆಸಿದ ಘಟನೆ  ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ.

ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 60 ವರ್ಷದ ಕಲಾಮುದ್ದೀನ್ ಖಾನ್ ಹತ್ಯೆಗೀಡಾದವರಾಗಿದ್ದಾರೆ. ದಾಳಿ ನಡೆದ ತಕ್ಷಣವೇ ಕಲಾಮುದ್ದೀನ್ ಅವರನ್ನು ತಕ್ಷಣವೇ ಲಾಲ್ ಗನಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.  ಆದರೆ ಅವರ ಸ್ಥಿತಿ ಗಂಭೀರವಾಗಿರುವುದರಿಂದ ವಾರಣಾಸಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು 6 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಈ ಪೈಕಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ