ಲಿಖಿಂಪುರ ರೈತರ ಹತ್ಯಾಕಾಂಡ: ಬಿಎಸ್ ಪಿ ನಾಯಕರನ್ನೂ ಗೃಹ ಬಂಧನದಲ್ಲಿರಿಸಲಾಗಿದೆ | ಮಾಯಾವತಿ
ಲಕ್ನೋ: ಲಿಖಿಂಪುರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸ್ಥಳಕ್ಕೆ ಆಗಮಿಸಲು ಯೋಜಿಸಿದ್ದ ಬಿಎಸ್ ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರನ್ನು ಗೃಹಬಂಧನದಲ್ಲಿಡಲಾಗಿದೆ ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಸತೀಶ್ ಚಂದ್ರ ಮಿಶ್ರಾ ಅವರನ್ನು ಗೃಹ ಬಂಧನದಲ್ಲಿರಿಸಿರುವ ಕಾರಣ ಪಕ್ಷದ ನಿಯೋಗವು ಲಿಖಂಪುರ್ ಖೇರಿಗೆ ಹೋಗಿ ಘಟನೆಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆಯಲು ಸಾಧ್ಯವಾಗಲಿಲ್ಲ. ರೈತರ ಹತ್ಯಾಕಾಂಡ ನಡೆದಿರುವುದು ಬಹಳ ದುಃಖವನ್ನುಂಟು ಮಾಡಿದೆ. ಇದು ಖಂಡನೀಯ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದಿರುವ ಈ ಹತ್ಯಾಕಾಂಡ ಪ್ರಕರಣದಲ್ಲಿ ಇಬ್ಬರು ಬಿಜೆಪಿಯ ಮಂತ್ರಿಗಳು ಭಾಗಿಯಾಗಿರುವುದರಿಂದ ಈ ಘಟನೆ ಸರಿಯಾದ ಸರ್ಕಾರಿ ತನಿಖೆ ನಡೆಯುವ ಮತ್ತು ಸಂತ್ರಸ್ತರಿಗೆ ನ್ಯಾಯ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆಯೂ ಕಾಣುತ್ತಿಲ್ಲ ಎಂದು ಅವರು ಹೇಳಿದರು.
ಈವರೆಗೆ ಘಟನೆಯಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಇದೆ. ಈ ಪ್ರಕರಣದ ನ್ಯಾಯಾಂಗ ತನಿಖೆಯ ಅಗತ್ಯವಿದೆ ಎಂದು ಮಾಯಾವತಿ, ರೈತರ ಹತ್ಯಾಕಾಂಡ ಪ್ರಕರಣದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ
ಹತ್ಯೆಯಾದ 8 ರೈತರ ಕುಟುಂಬಗಳ ಭೇಟಿಗೆ ತೆರಳಿದ ಪ್ರಿಯಾಂಕಾ ಗಾಂಧಿ ಅರೆಸ್ಟ್!
ಕಾರು ಹತ್ತಿಸಿ ಪ್ರತಿಭಟನಾ ನಿರತ ಮೂವರು ರೈತರ ಭೀಕರ ಹತ್ಯೆ ಮಾಡಿದ ಕೇಂದ್ರ ಸಚಿವರ ಪುತ್ರ!
ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್
ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ ‘ಜೈ ಭೀಮ್’ ಬಹುನಿರೀಕ್ಷಿತ ಚಿತ್ರ
ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್.ಈಶ್ವರಪ್ಪ ಆರೋಪ