ಬಿಎಸ್ ಪಿಯನ್ನು ಅಧಿಕಾರಕ್ಕೆ ತಂದರೆ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ | ಮಾಯಾವತಿ ಘೋಷಣೆ - Mahanayaka

ಬಿಎಸ್ ಪಿಯನ್ನು ಅಧಿಕಾರಕ್ಕೆ ತಂದರೆ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ | ಮಾಯಾವತಿ ಘೋಷಣೆ

15/01/2021

ಲಕ್ನೋ: ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯನ್ನು ಅಧಿಕಾರಕ್ಕೆ ತಂದರೆ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ.


Provided by

ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ವಿತರಣೆ ಮಾಡುವ ಕೇಂದ್ರ ಸರ್ಕಾರದ ಕಾರ್ಯಕ್ರಮವನ್ನು ಪಕ್ಷ ಸ್ವಾಗತಿಸುತ್ತದೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ಜನತೆಗೆ ಉಚಿತವಾಗಿ ಲಸಿಕೆಯನ್ನು ನೀಡಬೇಕೆಂದು ಎಂದು ಒತ್ತಾಯಿಸಿದ ಅವರು,  ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಉತ್ತರಪ್ರದೇಶದಲ್ಲಿ ಬಿಎಸ್ ಪಿ ಪಕ್ಷ ಅಧಿಕಾರಿಕ್ಕೆ ಬಂದಿದ್ದೇ ಆದರೆ, ನಾವು ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುತ್ತೇವೆ ಎಂದು ಘೋಷಿಸಿದರು.

ಉತ್ತರಪ್ರದೇಶ ಹಾಗೂ ಉತ್ತರಾಖಂಡ್ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿಯು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ.  ನಾವು ಸ್ವಂತ್ರವಾಗಿಯೇ ಚುನಾವಣೆ ಎದುರಿಸುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.


Provided by

ಇನ್ನೂ ಕೃಷಿ ಕಾಯ್ದೆಯ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಎಲ್ಲಾ ಆಗ್ರಹಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ