ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್: ಇಂದು ಕೇಂದ್ರ ಬಜೆಟ್– 2023
ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು.
ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆಗೆ ಅಂಕಿತ ಪಡೆದುಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯ ಕೊನೆಯ ಬಜೆಟ್ ಇದಾಗಿದ್ದು, ಈ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿದೆ. ಕೇಂದ್ರ ಸರ್ಕಾರ ದೇಶದ ಜನತೆಯ ಮೇಲಿರುವ ತೆರಿಗೆ ಹೊರೆ ಸೇರಿದಂತೆ ಹಲವು ರೀತಿಯ ಬೆಲೆ ಏರಿಕೆಗಳನ್ನು ಇಳಿಸುವ ನಿರೀಕ್ಷೆ ಇದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw