ಸರ್ವಜನ ಹಿತದ ಬಜೆಟ್ : ಎಸ್.ಆರ್.ವಿಶ್ವನಾಥ್ - Mahanayaka
6:07 PM Thursday 12 - December 2024

ಸರ್ವಜನ ಹಿತದ ಬಜೆಟ್ : ಎಸ್.ಆರ್.ವಿಶ್ವನಾಥ್

s r vishwanath
17/02/2023

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2023-24 ನೇ ಸಾಲಿನ ಬಜೆಟ್ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ಹಿಂದುಳಿದ ವರ್ಗಗಳು, ವಿದ್ಯಾರ್ಥಿ ಸಮೂಹ ಸ್ನೇಹಿ ಮತ್ತು ಒಟ್ಟಾರೆ ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಒತ್ತು ಕೊಡುವ ಬಜೆಟ್ ಆಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ 9,698 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿರುವುದು ಮುಂಬರುವ ದಿನಗಳಲ್ಲಿ ನಗರವು ಮತ್ತಷ್ಟು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಲಿದೆ. ಈಗಾಗಲೇ, ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿಯಲ್ಲಿ 6000 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇದೀಗ ಇನ್ನೂ ಹೆಚ್ಚು ಹಣವನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.

ನಾಡಿನ ಕೃಷಿಕರಿಗೆ ಶೂನ್ಯ ಬಡ್ಡಿ ಸಾಲವನ್ನು 5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಿರುವುದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ್ ಜ್ಯೋತಿ ಯೋಜನೆ ಜಾರಿ,

“ಸಹಸ್ರ ಸರೋವರ”ಕಾರ್ಯಕ್ರಮದಡಿ 1 ಸಾವಿರ ಸರೋವರಗಳನ್ನು ಅಭಿವೃದ್ಧಿಪಡಿಸುವುದು,  “ಭೂಸಿರಿ ಯೋಜನೆ’’ಯಡಿ ರೈತರಿಗೆ 10 ಸಾವಿರ ರೂಪಾಯಿಗಳ ಧನ ಸಹಾಯ ಹೀಗೆ ರೈತರಿಗೆ ನೆರವಾಗುವ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಮಹಿಳೆಯರು, ಮಕ್ಕಳ ಪೋಷಣೆ, ವಿದ್ಯಾರ್ಥಿನಿಯರು ಹೀಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಘೋಷಣೆ ಮಾಡುವ ಮೂಲಕ ಈ ವರ್ಗದ ಶ್ರೇಯೋಭಿವೃದ್ಧಿ ಬದ್ಧತೆಯನ್ನು ತೋರಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳ ಅಭಿವೃದ್ಧಿಗೆ ಒಟ್ಟಾರೆಯಾಗಿ 17,938 ಕೋಟಿ ರೂಪಾಯಿಗಳನ್ನು ನೀಡುವ ಮೂಲಕ ಬೆಂಗಳೂರು ನಗರ ಮತ್ತು ಇತರ ನಗರಗಳ ಅಭಿವೃದ್ಧಿಗೆ ಸಮಪಾಲು ನೀಡಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಪಕ್ಷ ಬಿಜೆಪಿಯ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ