ಬಜೆಟ್​ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ - Mahanayaka
3:28 AM Wednesday 11 - December 2024

ಬಜೆಟ್​ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

budget session
26/01/2022

ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಬಜೆಟ್​​​ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜ.31 ರಂದು ಈ ಸಭೆ ವರ್ಚುಯಲ್​ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಕೋರಲಿದ್ದಾರೆ.

ಫೆ. 1ರಂದೇ ಬಜೆಟ್​ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಮಹತ್ವ ಪಡೆದುಕೊಂಡಿದೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ, ಸಂಸತ್​ ಕಲಾಪ ಸುಗಮವಾಗಿ ನಡೆಯುಂತಾಗಲು ಎಲ್ಲರ ಸಹಕಾರ ಅಗತ್ಯ ಇದೆ. ಈ ಬಗ್ಗೆ ಚರ್ಚಿಸುವ ಉದ್ದೇಶದಿಂದ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಉಭಯ ಸದನಗಳ ಕಾರ್ಯ ಕಲಾಪಗಳು ಸರಳವಾಗಿ ಹಾಗೂ ಸುಗಮವಾಗಿ ನಡೆಯಲು ತಮ್ಮೆಲ್ಲರ ಸಹಕಾರ ಕೋರುತ್ತೇನೆ. ಈ ಸಂಬಂಧದ ಸಭೆ ಜನವರಿ 31 ರ ಮಧ್ಯಾಹ್ನ 3 ಗಂಟೆಗೆ ವರ್ಚುಯಲ್​ ಮೂಲಕ ನಡೆಯಲಿದ್ದು, ಎಲ್ಲ ನಾಯಕರು ಭಾಗವಹಿಸುವಂತೆ ಸಚಿವರು ಕೋರಿದ್ದಾರೆ.

ಬಜೆಟ್​ ಅಧಿವೇಶನ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಜ. 31ರಿಂದ ಫೆ. 11 ರವರೆಗೂ ಹಾಗೂ ಎರಡನೇ ಹಂತ ಮಾ.​ 14 ರಿಂದ ಏ. 8 ರವರೆಗೆ ನಡೆಯಲಿದೆ. ಕೋವಿಡ್​ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ರಾಜ್ಯಸಭಾ ಕಲಾಪ ಹಾಗೂ ಲೋಕಸಭಾ ಕಲಾಪಗಳು ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 9 ರವರೆಗೆ ನಡೆಯಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ

ಸಂವಿಧಾನ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸರ್ಕಾರದಿಂದ ಅಗೌರವ!

ನಾರಾಯಣ ಗುರುಗಳ ಬಗ್ಗೆ ಎಲ್ಲರಿಗೂ ಅಭಿಮಾನ ಇದೆ: ಸಚಿವ ಎಸ್.ಅಂಗಾರ

ನಾಪತ್ತೆಯಾಗಿದ್ದ ಯುವಕನ ಬಿಡುಗಡೆಗೆ ಚೀನಾ ಒಪ್ಪಿಗೆ: ಕೇಂದ್ರ ಸಚಿವ ಕಿರಣ್ ರಿಜಿಜು

ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್‌ ಗೆ ಹೋಗುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ