ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ; ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ - Mahanayaka

ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ; ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ

asi umayeshaya
01/02/2022

ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಸಹಾಯಕ ಸಬ್‌ ಇನ್ಸ್‌ಪೆಕ್ಟರ್ ಆಗಿದ್ದ ಎಸ್‌.ಉಮೇಶ್‌ ಗೆ ಇಲ್ಲಿಯ ಎರಡನೇ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಸೋಮವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

ದಂಡದ ಮೊತ್ತವನ್ನು ಮೇಲ್ಮನವಿ ಅವಧಿ ಮುಗಿದ ಬಳಿಕ ಸಂತ್ರಸ್ತೆಗೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಪರಿಹಾರ ನಿಗದಿಪಡಿಸಲು ಪ್ರಕರಣದ ಕಡತವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ಘಟನೆಯ ನಂತರ ಉಮೇಶ್‌ನನ್ನು ಬಂಧಿಸಲಾಗಿದ್ದು, 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಿದೆ.

ಘಟನೆಯ ವಿವರ: 2017ರ ಜ. 15ರಂದು ನಸುಕಿನ ಜಾವ ನಗರದ ಅಂತರಸನಹಳ್ಳಿ ಸೇತುವೆ ಬಳಿ ನಡೆದುಕೊಂಡು ಹೊರಟಿದ್ದ ಮಹಿಳೆಯನ್ನು ಆಕೆಯ ಮನೆಗೆ ಬಿಡುವ ನೆಪದಲ್ಲಿ ರಾತ್ರಿ ಗಸ್ತಿನಲ್ಲಿದ್ದ ಗ್ರಾಮಾಂತರ ಎಎಸ್‌ಐ ಉಮೇಶ್ ವಾಹನದಲ್ಲಿ ಹತ್ತಿಸಿಕೊಂಡು ನಗರದಲ್ಲಿ ಸುತ್ತಾಟ ನಡೆಸಿ, ವಾಹನದಲ್ಲೇ ಅತ್ಯಾಚಾರ ನಡೆಸಿದ್ದ. ನಂತರ ಮಹಿಳೆಯ ಮನೆಯವರಿಗೆ ಕರೆಮಾಡಿ, ಆಕೆಯನ್ನು ಬಿಟ್ಟು ಹೋಗಿದ್ದ. ಮನೆಯವರಿಗೆ ಮಹಿಳೆ ಅತ್ಯಾಚಾರದ ವಿಚಾರ ತಿಳಿಸಿದ್ದಾಳೆ.

ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ಕೂಡ ನಡೆದಿತ್ತು. ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದರಿಂದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಂಟರ್​ ನೆಟ್​​ ನಲ್ಲಿ ತನ್ನ ನಗ್ನ ವಿಡಿಯೋ ನೋಡಿ ಶಾಕ್ ಆದ ಬೆಂಗಳೂರಿನ ಯುವಕ

4 ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ!

ಮುಂದಿನ 25 ವರ್ಷಗಳ ದೂರದೃಷ್ಟಿಯ ಬಜೆಟ್‌: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ಕೇಂದ್ರ ಬಜೆಟ್ ಮೇಲೆ ನಂಬಿಕೆಯಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಕೇಂದ್ರ ಬಜೆಟ್ 2022: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಇತ್ತೀಚಿನ ಸುದ್ದಿ