ಆಟೋ ರಿಕ್ಷಾ ಪಲ್ಟಿಯಾಗಿ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ!
ಮಂಗಳೂರು — ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಆಟೋ ರಿಕ್ಷಾವೊಂದು ಪಲ್ಟಿ ಹೊಡೆದ ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಧ್ಯರಾತ್ರಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಮಧ್ಯೆ ಅಪಘಾತ ಸಂಭವಿಸಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದವರನ್ನು ಮಂಗಳೂರು ಹೈಲಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka