ಲಾರಿಗೆ ಬುಲೆರೋ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲಿ ಸಾವು - Mahanayaka
3:32 PM Tuesday 10 - December 2024

ಲಾರಿಗೆ ಬುಲೆರೋ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲಿ ಸಾವು

tumakuru accident
10/12/2024

ತುಮಕೂರು: ಬೊಲೆರೋ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಚಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಸುಮಾರು 9 ಗಂಟೆ ಸಂದರ್ಭದಲ್ಲಿ ಘಟನೆ ನಡೆದಿದ್ದು ಬೊಲೆರೋ ಚಾಲಕ ಗಿರೀಶ್ ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಮಾರುತಿ ವ್ಯಾನ್ ಏಕಾಏಕಿ ಯುಟರ್ನ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಲಾರಿ ಚಾಲಕ ಬ್ರೇಕ್ ಹೊಡೆದಿದ್ದಾನೆ, ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಗಿರೀಶ್ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ