ಧಾರಾಕಾರ ಮಳೆ: ಹೊಲದಲ್ಲಿ ಮೇಯುತ್ತಿದ್ದ ಎತ್ತು ಸಿಡಿಲು ಬಡಿದು ಸಾವು
19/10/2024
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾರೀ ಮಳೆ ಮಧ್ಯೆ ಸಿಡಿಲಿಗೆ ಎತ್ತು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ. ಇದೇ ಸಂದರ್ಭದಲ್ಲಿ ಹೊಲದಲ್ಲಿ ಮೇಯುತ್ತಿದ್ದ ಎತ್ತಿಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಎತ್ತು ದಾರುಣವಾಗಿ ಸಾವನ್ನಪ್ಪಿದೆ.
ಮಳೆಗಾಲದ ಮಳೆಯಂತೆ ಒಂದೇ ಸಮನೆ ಹಿಂಗಾರು ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಧಾರಾಕಾರ ಮಳೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: