ಬುಲೆಟ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ಫ್ಲೈಓವರ್ ನಿಂದ ಕೆಳಗೆ ಬಿದ್ದು ಸವಾರ ಸಾವು - Mahanayaka

ಬುಲೆಟ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ಫ್ಲೈಓವರ್ ನಿಂದ ಕೆಳಗೆ ಬಿದ್ದು ಸವಾರ ಸಾವು

thokkottu
27/10/2021

ಉಳ್ಳಾಲ:  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ.

ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಂಪಲ ಕಡೆಗೆ ಅವರು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸುಬ್ರಹ್ಮಣ್ಯ ಅವರು, ರಸ್ತೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು  ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿದಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ