ಮಾದಪ್ಪನ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರ ಬಸ್ ಪಲ್ಟಿ:15 ಮಂದಿಗೆ ಗಾಯ
ಚಾಮರಾಜನಗರ: ಗುಜರಾತ್ ಪ್ರವಾಸಿಗರ ಬಸ್ಸೊಂದು ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಮೀಪ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ಗುಜರಾತ್ ಮೂಲದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ತಮಿಳುನಾಡು ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ವೇಳೆ ಪಾಲಾರ್ ನ ಎರಡನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಸ್ ಹಿಂದಕ್ಕೆ ಜಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ಎಲ್ಲರನ್ನೂ ಮಲೆಮಹದೇಶ್ವರ ಬೆಟ್ಟದ ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ಕೊಡಲಾಗುತ್ತಿದೆ. ಒಂದು ತಿಂಗಳ ಭಾರತ ಪ್ರವಾಸಕ್ಕಾಗಿ ಇವರುಗಳು ಗುಜರಾತ್ ನಿಂದ ಬಂದಿದ್ದರು ಎಂದು ತಿಳಿದುಬಂದಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw