ಬಸ್‌- ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು - Mahanayaka
12:49 AM Tuesday 4 - February 2025

ಬಸ್‌- ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

accident
17/02/2022

ಆಲಮಟ್ಟಿ: ಖಾಸಗಿ ಬಸ್‌ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಲ್ಲಿನ ಹಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ಸುನೀಲ ಮಲ್ಲಪ್ಪ. ಮಂಕಣಿ(23) ಹಾಗೂ ಯಲ್ಲನಗೌಡ ಬಸವರಾಜ. ಮಂಕಣಿ(20) ಎಂದು ಗುರುತಿಸಲಾಗಿದೆ.
ಯಲಗೂರ ಕ್ರಾಸ್‌ನಿಂದ ಬೆಂಗಳೂರಿಗೆ ತೆರಳುವ ಖಾಸಗಿ ಬಸ್‌ ಮತ್ತು ಆಲಮಟ್ಟಿಯಿಂದ ಅಬ್ಬಿಹಾಳ ಗ್ರಾಮಕ್ಕೆ ಹೋಗುತ್ತಿದ್ದ ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿರುವದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸೈ ಚಂದ್ರಶೇಖರ ಹೆರಕಲ್, ಸಿಪಿಐ ಸೋಮಶೇಖರ ಜುಟ್ಟಲ್ ಹಾಗೂ ಡಿವೈಎಸ್ಪಿ ಅರುಣಕುಮಾರ ಕೋಳೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ನಿಧನ

ತಂದೆಯ ತಿಥಿ ಕಾರ್ಯದ ದಿನವೇ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮಗಳು ಸ್ಥಳದಲ್ಲೇ ಸಾವು

ಮಕ್ಕಳಿಲ್ಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ

 

ಇತ್ತೀಚಿನ ಸುದ್ದಿ