ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಯೋಧರಿದ್ದ ಬಸ್ ಪಲ್ಟಿ: 6 ಯೋಧರ ದಾರುಣ ಸಾವು - Mahanayaka

ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಯೋಧರಿದ್ದ ಬಸ್ ಪಲ್ಟಿ: 6 ಯೋಧರ ದಾರುಣ ಸಾವು

jammu
16/08/2022

ಜಮ್ಮು-ಕಾಶ್ಮೀರ: ಅಮರನಾಥ್ ಯಾತ್ರೆಯ ಭದ್ರತಾ ಕೆಲಸ ಮುಗಿಸಿ ಮರಳುತ್ತಿದ್ದ ಇಂಡೋ-ಟಿಬೆಟಿಯನ್ ಗಡಿ ಭದ್ರತಾ ಪಡೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರಿದ್ದ ಬಸ್ ನದಿಗೆ ಉರುಳಿ ಬಿದ್ದು ಆರು ಮಂದಿ ಯೋಧರು  ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.


Provided by

ಚಂದನವಾರಿಯಿಂದ ಪಾಹಲ್ಗಾಮ್ ಗೆ ಯೋಧರು ಬಸ್ ನಲ್ಲಿ ತೆರಳುತ್ತಿದ್ದರು. ಚಂದನವಾರಿಯ ಬಳಿ ಮೊರ್ಹ ಫ್ರಿಸ್ಲಾನ್ ತಿರುವಿನಲ್ಲಿ ಬಸ್ ಬ್ರೇಕ್ ಫೈಲ್ ಆಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ನದಿಯ ಬದಿಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ 6 ಮಂದಿ ಯೋಧರು ಮೃತಪಟ್ಟಿದ್ದರೆ, 30ಕ್ಕೂ ಅಧಿಕ ಯೋಧರು ಗಾಯಗೊಂಡಿದ್ದಾರೆ. ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕೆ ಆಗಸ್ಟ್ 11ರಂದು ನಿಯೋಜಿಸಿದ್ದ ಗಡಿ ಭದ್ರತಾ ಪಡೆಯ 37 ಮತ್ತು ಜಮ್ಮು-ಕಾಶ್ಮೀರದ ಇಬ್ಬರು ಪೊಲೀಸರಿ ಅಪಘಾತಕ್ಕೀಡಾದ ಬಸ್ ನಲ್ಲಿದ್ದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ