ಓವರ್ ಟೇಕ್ ಮಾಡುವ ವೇಳೆ ಸೇತುವೆಗೆ ಡಿಕ್ಕಿ ಹೊಡೆದ ಬಸ್!
ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ ವೊಂದು ಸೇತುವೆಗೆ ಗುದ್ದಿದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಗಳು ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾದ ಬಸ್ ಆಗಿದೆ. ಚಾಲಕನ ಅಜಾಗರೂಕತೆ, ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: