ಬಸ್ ಗೆ ಟ್ರಕ್ ಡಿಕ್ಕಿ: ನಾಲ್ವರು ಸಾವು, 15 ಮಂದಿಗೆ ಗಂಭೀರ ಗಾಯ
ಭೋಪಾಲ್: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 15 ಮಂದಿಗೆ ಗಾಯಗಳಾದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ.
ಅಹ್ಮದಾಬಾದ್ ಗೆ ತೆರಳುತ್ತಿದ್ದ ಬಸ್, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ಗಾಯಾಳುಗಳನ್ನು ಉಪಚರಿಸಿ, ಉಜ್ಜಯಿನಿ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಕಾರಣಗಳು ತಿಳಿದು ಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw