ಡಬಲ್ ಡೆಕ್ಕರ್ ಬಸ್ ಗಳ ಮುಖಾಮುಖಿ ಡಿಕ್ಕಿ: 8 ಮಂದಿಯ ದಾರುಣ ಸಾವು

ಡಬಲ್ ಡೆಕ್ಕರ್ ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ
ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ ಎಕ್ಸ್ ಪ್ರೆಸ್ ವೇ ನಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ಮತ್ತೊಂದು ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಕರ ಅಪಘಾತ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka