ಬಸ್ ಗೆ ಡಿಕ್ಕಿ ಹೊಡೆದ ಟ್ರಕ್: 6 ಮಂದಿ ಸ್ಥಳದಲ್ಲೇ ಸಾವು
ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟು 20 ಮಂದಿಗೆ ಗಾಯಗಳಾದ ಘಟನೆ ಒಡಿಶಾದ ಜರ್ಸುಗುಡದಲ್ಲಿ (Jharsuguda) ನಡೆದಿದೆ.
ಕಂಪೆನಿ ನೌಕರರು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ಸಂಬಲ್‌ಪುರ-ಜಾರ್ಸುಗುಡ ಬಿಜು ಎಕ್ಸ್‌ಪ್ರೆಸ್ ವೇನಲ್ಲಿ ಈ ಭಾರೀ ಅಪಘಾತ ನಡೆದಿದ್ದು, ನೌಕರರು ಕೆಲಸ ಮುಗಿಸಿ ಪ್ಲಾಂಟ್ ಸೈಟ್‌ನಿಂದ ಝಾರ್ಸುಗುಡ ಪಟ್ಟಣಕ್ಕೆ ಹಿಂದಿರುಗುತ್ತಿದ್ದರು.’
ಪವರ್ ಹೌಸ್ ಚಾಕ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಏಕಾಏಕಿ ಬಸ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಭಾರೀ ಅನಾಹುತವೇ ನಡೆದು ಹೋಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka