ದಕ್ಷಿಣ ಕನ್ನಡ: ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ! - Mahanayaka
10:12 AM Thursday 12 - December 2024

ದಕ್ಷಿಣ ಕನ್ನಡ: ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ!

vidyagiri mudubidre
30/06/2022

ಮೂಡುಬಿದಿರೆ: ಬಸ್ ಏರುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ.

ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ ಗೆ ಹತ್ತಿದ್ದಾಳೆ. ಈಕೆ ಬಸ್ ನ ಸ್ಟೆಪ್ ಗೆ ಕಾಲಿಟ್ಟು ಮೇಲೆ ಹೋಗುವ ಸಂದರ್ಭದಲ್ಲಿಯೇ ಬಸ್ ಚಾಲಕ ಬಸ್ಸನ್ನು ಚಾಲನೆ ಮಾಡಿದ್ದಾನೆ ಎನ್ನಲಾಗಿದೆ ಪರಿಣಾಮವಾಗಿ ವಿದ್ಯಾರ್ಥಿನಿ ಆಯ ತಪ್ಪಿ ಕೆಳಗೆ ಬಿದ್ದಿದ್ದಾಳೆ.

ಅದೃಷ್ಟವಶಾತ್ ಬಸ್ಸಿನ ಚಕ್ರದಿಂದ ಸ್ವಲ್ಪದರಲ್ಲೆ ತಪ್ಪಿಸಿಕೊಂಡು ಅಪಾಯದಿಂದ ಪಾರಾಗಿದ್ದಾಳೆ. ತಕ್ಷಣ ವಿದ್ಯಾರ್ಥಿನಿಯನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಏಕನಾಥ್ ಶಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ!

ರೋಡು ತೋಡಾಯಿತು: ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ವಿದ್ಯಾರ್ಥಿಗಳು ರಸ್ತೆ ದಾಟಿದ್ದು ಹೀಗೆ

ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ;  ಎಂಟು ಮಂದಿ ಸಾವು

ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ವಿದ್ಯಾರ್ಥಿನಿಯರ ತಾಯಂದಿರಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕ ಅಮಾನತು!

ಕೈಗಳನ್ನು ಕಟ್ಟಿಕೊಂಡು 780 ಮೀಟರ್ ಅಗಲದ ನದಿಯನ್ನು ಈಜಿ ದಾಟಿದ ವೃದ್ಧೆ!

ಇತ್ತೀಚಿನ ಸುದ್ದಿ