ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು

ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತಿದ್ದ ಇಂದು ಶೇಖರ್ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಕಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka