ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬಸ್ ಮಗುಚಿ ಬಿದ್ದು 6 ಮಂದಿಯ ದಾರುಣ ಸಾವು
ತುಮಕೂರು: ತುಮಕೂರಿನಲ್ಲಿ ಬೆಳ್ಳಂ ಬೆಳ್ಳಗೆ ಭೀಕರ ಅಪಘಾತ ನಡೆದಿದ್ದು, ಬಸ್ಸೊಂದು ಮಗುಚಿ ಬಿದ್ದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ತಿರುವಿನ ಬಳಿ ಈ ದುರ್ಘಟನೆ ಸಂಭವಿಸಿದೆ. ಸದ್ಯದ ಮಾಹಿತಿಗಳ ಪ್ರಕಾರ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, 25ಕ್ಕೂ ಅಧಿಕ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಭೀಕರ ಅಪಘಾತಕ್ಕೆ ಪಾವಗಡ ಜನತೆ ಬೆಚ್ಚಿಬಿದ್ದಿದ್ದು, ಸ್ಥಳದಲ್ಲಿ ನೂರಾರು ಸಂಖ್ಯೆಯ ಜನರು ಜಮಾಯಿಸಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಿಸಿಲಿನ ಬೇಗೆಯಲ್ಲಿ ಬಾಯಾರಿಗೆ ನೀಗಿಸಲು ಈ ಜ್ಯೂಸ್ ಉತ್ತಮ
YouTube ಚಾನಲ್ ಮೂಲಕ ಕೋಮುವಾದ ಪ್ರಚಾರ: ಆ್ಯಂಕರ್ ಅರೆಸ್ಟ್
ಹೋಳಿ ಆಡುತ್ತಿದ್ದ ವೇಳೆ ದುರಂತ: ನೀರಿನ ತೊಟ್ಟಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು