ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿ ಅದೇ ಬಸ್ ನಡಿಗೆ ಸಿಲುಕಿ ಬಲಿಯಾದಳು | ಹೃದಯ ವಿದ್ರಾವಕ ಘಟನೆ
ರಾಮನಗರ: ಬಸ್ ಹರಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಹೊನ್ನಾಪುರ ಬಳಿಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದ್ದು, ಅಜ್ಜಿಯ ಜೊತೆಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
6 ವರ್ಷ ವಯಸ್ಸಿನ ಜೀವಿತಾ ಮೃತಪಟ್ಟ ಬಾಲಕಿಯಾಗಿದ್ದು, ಈಕೆ ಕುಮಾರ್ ಹಾಗೂ ಜ್ಯೋತಿ ದಂಪತಿಯ ಏಕೈಕ ಪುತ್ರಿಯಾಗಿದ್ದಾಳೆ. ಬೆಂಗಳೂರಿನಿಂದ ತನ್ನ ಅಜ್ಜಿಯ ಜೊತೆಗೆ ಉಜ್ಜಿನಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಳು.
ಪ್ರಯಾಣಿಸುತ್ತಿದ್ದ ಬಸ್ ನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದು, ಈ ವೇಳೆ ಬಸ್ ನ ಮುಂಭಾಗದಲ್ಲಿ ಕುಳಿತಿದ್ದ ಬಾಲಕಿ, ಬಸ್ ನ ಗಾಜಿಗೆ ಅಪ್ಪಳಿಸಿ ಗಾಜು ಒಡೆದು ರಸ್ತೆಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಬಾಲಕಿಯ ಮೇಲೆಯೇ ಹರಿದಿದ್ದು, ಪರಿಣಾಮವಾಗಿ ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಬಾಲಕಿಯನ್ನು ಕಳೆದುಕೊಂಡ ಪೋಷಕರ ಶೋಕ ಮಡುಗಟ್ಟಿದೆ.
ಇನ್ನಷ್ಟು ಸುದ್ದಿಗಳು…
ಆಸ್ಕರ್ ಫರ್ನಾಂಡಿಸ್ ಆರೋಗ್ಯ ಸ್ಥಿತಿ ನೆನೆದು ಗಳಗಳನೇ ಅತ್ತ ಜನಾರ್ದನ ಪೂಜಾರಿ
25-30 ಮಕ್ಕಳ ಮೇಲೆ ಬಾಣಸಿಗನಿಂದ ಲೈಂಗಿಕ ದೌರ್ಜನ್ಯ | ಕಿರುಕುಳದ ಬಳಿಕ ಈತ ಮಾಡುತ್ತಿದ್ದದ್ದೇನು ಗೊತ್ತಾ?
“ನಾನು ಕೂಡ ಬ್ರಾಹ್ಮಣ” | ಆಟದ ಮೈದಾನಕ್ಕೆ ಜಾತಿಯನ್ನು ಎಳೆದು ತಂದ ಸುರೇಶ್ ರೈನಾ
ಶಿಲ್ಪಾ ಶೆಟ್ಟಿಯ ಗಂಡ ಹಣ ಮಾಡಿದ್ದು ಹೇಗೆ? | ರಾಜ್ ಕುಂದ್ರಾ ಬಂಧನದ ಬೆನ್ನಲ್ಲೇ ವಿಡಿಯೋ ವೈರಲ್