ಬಸ್ ಗಾಗಿ ಕಾಯುತ್ತಿದ್ದ ವೃದ್ಧಗೆ ಬಸ್ ನಿಲ್ದಾಣದಲ್ಲಿಯೇ ಹೃದಯಾಘಾತ!

majestic
07/04/2021

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ, ಆರನೇ ವೇತನ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ಮುಷ್ಕರ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧರೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೆಜೆಸ್ಟಿಕ್‌‌‌ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೃದ್ದರೋರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಜಿಗಣಿಯಿಂದ ಬಂದಿದ್ದ 77 ವರ್ಷ ವಯಸ್ಸಿನ  ಚೆನ್ನಪ್ಪ ಎಂಬವರು ಮೃತಪಟ್ಟವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಮೃತರ ಮೃತದೇಹವನ್ನು  ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೊವಿಡ್ ಟೆಸ್ಟ್ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಚೆನ್ನಪ್ಪ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಚಹಾ ಸೇವಿಸಿದ್ದಾರೆ. ಇದಾದ ಬಳಿಕ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

Exit mobile version