ಬಸ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಐವರು ಸಜೀವ ದಹನ
ರಾಮಘರ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕ ಸಾವನ್ನಪ್ಪಿರುವವರು ಎಂದು ತಿಳಿದು ಬಂದಿದೆ.
ಇಲ್ಲಿನ ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಈ ಘಟನೆ ನಡೆದಿದ್ದು, ಐವರು ಮೃತಪಟ್ಟಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಇನ್ನೂ ಮೃತಪಟ್ಟವರು ಪಾಟ್ನಾ ಮೂಲದವರು ಎಂದು ಹೇಳಲಾಗಿದೆ. ಸದ್ಯ ಮೃತಪಟ್ಟವರ ವಿಳಾಸ ಹಾಗೂ ವಿವರಗಳನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದಿರುವ ಈ ಭೀಕರ ಅಪಘಾತ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಮಂಗಳೂರು: ನಿಫಾ ವೈರಸ್ ಶಂಕೆ ಇದ್ದ ಯುವಕನ ಪರೀಕ್ಷೆ ವರದಿ ನೆಗೆಟಿವ್ | ಆರೋಗ್ಯಾಧಿಕಾರಿ
ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸ್ ಗೆ ಹೋಗಿದ್ದ ವೈದ್ಯೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು!
ಪ್ರಧಾನಿ ಮೋದಿ ಖಾತೆಗೆ ಹಣ ಹಾಕಿದ್ದಾರೆ ಎಂದು ಭಾವಿಸಿ ಖರ್ಚು ಮಾಡಿ ಜೈಲು ಸೇರಿದ ಯುವಕ!
ಸೋದರಳಿಯನ ಪತ್ನಿಗೆ ಹಲ್ಲೆ, ವಿಷ ಕುಡಿಸಲು ಯತ್ನ: ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ
ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!
ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!
ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ