ಕೆಲಸದಾಕೆಯ ಜೊತೆಗೆ ಲೈಂಗಿಕ ಕ್ರಿಯೆಯ ವೇಳೆ ಉದ್ಯಮಿ ಹೃದಯಾಘಾತದಿಂದ ಸಾವು! - Mahanayaka
3:38 AM Tuesday 10 - December 2024

ಕೆಲಸದಾಕೆಯ ಜೊತೆಗೆ ಲೈಂಗಿಕ ಕ್ರಿಯೆಯ ವೇಳೆ ಉದ್ಯಮಿ ಹೃದಯಾಘಾತದಿಂದ ಸಾವು!

death
25/11/2022

ಬೆಂಗಳೂರು: ಕೆಲಸದಾಕೆಯ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ 67 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಈ ವೇಳೆ ವ್ಯಕ್ತಿಯ ಮೃತದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಎಸೆದ ಆರೋಪದಲ್ಲಿ ಮಹಿಳೆ ಹಾಗೂ ಕುಟುಂಬದ ಸದಸ್ಯರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

67 ವರ್ಷದ ಉದ್ಯಮಿಯ ಮೃತದೇಹ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಎಸೆದ ರೀತಿಯಲ್ಲಿ ಪತ್ತೆಯಾದ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. 35 ವರ್ಷದ ಮಹಿಳೆಯ ಜೊತೆಗೆ ಸಂಬಂಧ ಹೊಂದಿದ್ದ ಉದ್ಯಮಿ, ನವೆಂಬರ್ 16ರಂದು ಮಹಿಳೆಯ ಮನೆಗೆ ಭೇಟಿ ನೀಡಿದ್ದ. ಬಳಿಕ ಮಹಿಳೆಯ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಹೃದಯಾಘಾತದಿಂದ ಹಾಸಿಗೆಯಲ್ಲಿಯೇ ಮೃತಪಟ್ಟಿದ್ದ ಎನ್ನಲಾಗಿದೆ.

ಮೃತದೇಹ ಪತ್ತೆಯಾದ ಬಳಿಕ ತನಿಖೆ ನಡೆಸಿದ ಪೊಲೀಸರು ಉದ್ಯಮಿಯ ಗುರುತು ಪತ್ತೆ ಹಚ್ಚಿದ ಬಳಿಕ ಫೋನ್ ಕರೆಯ ವಿವರಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹಿಳೆಯ ಮನೆಯೆ ಭೇಟಿ ನೀಡಿರುವ ವಿಚಾರ ತಿಳಿದು ಬಂದಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ