ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ: ಗ್ರಾ.ಪಂ. ಮಾಜಿ ಅಧ್ಯಕ್ಷರಿಂದ ಆರೋಪ
ಮೂಡಿಗೆರೆ: ತಾಲೂಕುನಂದಿಪುರ ಗ್ರಾ.ಪಂ. ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ.
ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ.
ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಬಸ್ ನಿಲ್ದಾಣ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka