7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ: ಇಂಡಿಯಾ ಮೈತ್ರಿಕೂಟಕ್ಕೆ ಮುನ್ನಡೆ
ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆ ನಡೆದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡದ ಕಾಂಗ್ರೆಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನ ನಗೆ ಬೀರಿವೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ್ದ ಇಂಡಿಯಾ ಮೈತ್ರಿಕೂಟ ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರ ಪತ್ನಿ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕಮಲೇಶ್ ಪಾಟೀಲ್ ಹಿಮಾಚಲ ಪ್ರದೇಶದ ದೆಹ್ರಾ ಕ್ಷೇತ್ರದಲ್ಲಿ ಜಯ ಗಳಿಸಿದ್ದಾರೆ.
ಮೈತ್ರಿಕೂಟದ ಅಂಗಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ, ಪಂಜಾಬ್‍ನ ಜಲಂಧರ್ ಪಶ್ಚಿಮ ಕ್ಷೇತ್ರವನ್ನು ಗೆದ್ದಿದೆ. ಆಮ್ ಆದ್ಮಿ ಪಕ್ಷದ ಮೋಹಿಂದರ್ ಭಗತ್ ಈ ಕೇತ್ರದಿಂದ 30 ಸಾವಿರಕ್ಕೂ ಅಧಿಕ ಮತಗಳ ಗೆಲುವು ಸಾಧಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಪಶ್ಚಿಮ ಬಂಗಾಲದ ಎಲ್ಲ ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಅಮರವಾಡ ಕ್ಷೇತ್ರದ ಎಣಿಕೆಯ ಅಂಕಿ ಅಂಶವನ್ನು 18ನೇ ಸುತ್ತಿನ ಬಳಿಕ ತಡೆಹಿಡಿಯಲಾಗಿದೆ. 20ನೇ ಸುತ್ತಿನ ಎಣಿಕೆಯಲ್ಲಿ ಎರಡು ಇವಿಎಂಗಳು ನಿಷ್ಕ್ರಿಯವಾಗಿವೆ. 19ನೇ ಸುತ್ತಿನ ಬಳಿಕ ಬಿಜೆಪಿಯ ಕಮಲೇಶ್ ಶಾ 1747 ಮತಗಳ ಅಂತರದಿಂದ ಮುಂದಿದ್ದಾರೆ.
ತಮಿಳುನಾಡಿನಲ್ಲಿ ಡಿಎಂಪಿ ಅಭ್ಯರ್ಥಿ ಅಣ್ಣಿಯೂರು ಸಿವಾ ವಿಕ್ರವಂಡಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಉತ್ತರಾಖಂಡದ ಮಂಗಲೋರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಖ್ವಾಝಿ ಮೊಹ್ಮದ್ ನಿಜಾಮುದ್ದೀನ್ ಜಯ ಗಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth