ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ: ತೇಜಸ್ವಿ ಸೂರ್ಯ, ನಟಿ ಶ್ರುತಿ ಸಾಥ್
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಗುರುವಾರ ಬೈಂದೂರಿನ ಮಿನಿ ವಿಧಾನಸೌಧದಲ್ಲಿ ರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಕ್ಷದ ನಾಯಕಿ, ನಟಿ ಶ್ರುತಿ, ಬೈಂದೂರು ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಬೈಂದೂರಲ್ಲಿ ನಡೆದ ಸಮಾವೇಶದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಸುನೀಲ್ ಕುಮಾರ್, ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.
ಇದಕ್ಕೂ ಮೊದಲು ನಡೆದ ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಸಮಾವೇಶದಲ್ಲೂ ಸಹಸ್ರಾರು ಮಂದಿ ಭಾಗಿಯಾದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ಪ್ರಭಾರಿ ದುಯ್ ಕುಮಾರ್ ಶೆಟ್ಟಿ, ಕಾಪು ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ, ಬೈಂದೂರು ಬಿಜೆಪಿ ಉಸ್ತುವಾರಿ ಕ್ಯಾ. ಬ್ರಿಜೇಶ್ ಚೌಟ, ಪ್ರಭಾರಿ ಕಿಶೋರ್ ಕುಮಾರ್, ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ದೇವಾಡಿಗ, ಮಾಲತಿ ನಾಯ್ಕ್, ಶ್ಯಾಮಲಾ ಕುಂದರ್, ಜಿ.ಪಂ. ಮಾಜಿ ಸದಸ್ಯರಾದ ಸುರೇಶ್ ಬಟವಾಡಿ, ರೋಹಿತ್ ಕುಮಾರ್ ಶೆಟ್ಟಿ, ಪ್ರಣಯ್ ಕುಮಾರ್ ಶೆಟ್ಟಿ, ಸುರೇಶ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಇತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw