ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ
ಬೆಂಗಳೂರು: ವಿಧಾನ ಪರಿಷತ್‍ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.
ಆದಷ್ಟು ಶೀಘ್ರವೇ ಎಂ ಎಲ್ ಸಿಗೆ ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಿ ತಿರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಶಿವಕುಮಾರ್‌ಗೂ ನಮಗೂ ಯಾವತ್ತು ಹೊಂದಾಣಿಕೆ ಆಗಲ್ಲ. ಅವರ ವಿಚಾರಧಾರೆಗಳು ನಮಗೆ ಆಗಲ್ಲ. ನಮಗೆ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಇತ್ತು. ಆದರೆ ಕಾಂಗ್ರೆಸ್ ಗೂ ನನಗೂ ಮುಗಿದ ಅಧ್ಯಾಯವಾಗಿದೆ. ಸಿದ್ದರಾಮಯ್ಯ ಅವರಿಂದ ನಾನು ಕಾಂಗ್ರೆಸ್ ಗೆ ಹೋಗಿದ್ದೆ. ಸೋನಿಯಾ ಗಾಂಧಿ ಅವರು ನನ್ನ ಭಾರ ಇಳಿಸಿದ್ದಾರೆ. ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಡಿವೈಡರ್ ಗೆ ಕಾರು ಡಿಕ್ಕಿ: ಚಾಲಕ ಸೇರಿ ಇಬ್ಬರು ಗಂಭೀರ
ಸಿದ್ದರಾಮಯ್ಯ ಮುಳುಗುತ್ತಿರುವ ಹಡಗು: ಸಚಿವ ಅಂಗಾರ
ವಾಟ್ಸಾಪ್ ಗ್ರೂಪ್ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ
ಅಂಬೇಡ್ಕರ್ ಪ್ರತಿಮೆಗೆ ಅವಮಾನ: ವಿಧಾನಸೌಧದ ಎದುರು ಸಂವಿಧಾನ ಪರ ಸಂಘಟನೆಗಳಿಂದ ಪ್ರತಿಭಟನೆ
ತುಲುನಾಡ್ ಮನ್ಸ ಸಮಾಜ ಸೇವಾ ಸಂಘದಿಂದ ಸಂವಿಧಾನ ದಿನಾಚರಣೆ