ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಮುಹೂರ್ತ ಫಿಕ್ಸ್!? | ಬಿಜೆಪಿ ಪಾಳಯದೊಳಗೆ ಕೇಳಿ ಬರುತ್ತಿರುವ ಸುದ್ದಿ ಏನ್ ಗೊತ್ತಾ?
ಬೆಂಗಳೂರು: ಜುಲೈ 26ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ನ ಅನಿರೀಕ್ಷಿತ ತೀರ್ಮಾನಗಳಿಂದಾಗಿ ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತಿರುವ ಸಂದರ್ಭದಲ್ಲಿಯೇ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗುತ್ತಿದೆ.
ಜುಲೈ 25ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಕರೆದಿದ್ದಾರೆ. ಅಂದು ಬಿಜೆಪಿಯ ಎಲ್ಲಾ ಶಾಸಕರು ಮತ್ತು ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆನ್ನಲಾಗಿದೆ. ಈ ಸಭೆಯಲ್ಲಿ 2 ವರ್ಷಗಳಲ್ಲಿ ಆಡಳಿತ ನಡೆಸಲು ಸಹಕಾರ ನೀಡಿದ ಶಾಸಕರಿಗೆ, ಸಚಿವರಿಗೆ ಅವರು ಧನ್ಯವಾದಗಳನ್ನು ಸಮರ್ಪಿಸಲಿದ್ದಾರೆ ಎಂದು ಹೇಳಲಾಗಿದೆ.
26ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಮ್ಮ ಸರ್ಕಾರದ ಸಾಧನಾ ಸಮಾವೇಶವನ್ನು ಸಿಎಂ ಯಡಿಯೂರಪ್ಪ ಕರೆದಿದ್ದಾರೆ. ಎರಡು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆಯನ್ನು ಈ ಸಭೆಯಲ್ಲಿ ಭಾಷಣ ಮಾಡಿ ವಿದಾಯ ನುಡಿಗಳನ್ನಾಡಲಿದ್ದಾರೆ ಎನ್ನುವ ಮಾತುಗಳು ಇದೀಗ ಬಿಜೆಪಿಯೊಳಗಿನಿಂದಲೇ ಕೇಳಿ ಬಂದಿದೆ. ಇನ್ನೂ ರಾಜೀನಾಮೆಗೂ ಮುನ್ನ ಯಡಿಯೂರಪ್ಪನವರು ತಮ್ಮ ತವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಪ್ರವಾಸ ಕೈಗೊಂಡು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎನ್ನುವ ಸುದ್ದಿಗಳು ಸದ್ಯ ಬಿಜೆಪಿ ಪಾಳಯದಲ್ಲಿ ಹರಿದಾಡುತ್ತಿವೆ. ಇನ್ನೂ ತಮ್ಮ ಪದ ತ್ಯಾಗ ವಿಚಾರವಾಗಿ ಜುಲೈ 22ರಂದು ಸಚಿವ ಸಂಪುಟ ಸಭೆ ಕೂಡ ಕರೆದಿದ್ದಾರೆ. ಈ ಸಭೆಯಲ್ಲಿ ಯಡಿಯೂರಪ್ಪ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.
ಇನ್ನಷ್ಟು ಸುದ್ದಿಗಳು…
ನಳಿನ್ ಕುಮಾರ್ ಕಟೀಲ್ ಆಡಿಯೋ ಸೋರಿಕೆ ಮಾಡಿದ್ದು ಇವರಂತೆ!
ಭರ್ಜರಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ | ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು?
“ಯಡಿಯೂರಪ್ಪನವರೇ ಸಿಎಂ ಆಗಿರಲಿ” | ಯಡಿಯೂರಪ್ಪರ ಋಣ ತೀರಿಸಿದ ಸ್ವಾಮೀಜಿಗಳು
ಶಿಲ್ಪಾ ಶೆಟ್ಟಿ ಗಂಡ ಮಾಡುತ್ತಿದ್ದದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕಕಾರಿ ವಿಡಿಯೋ | ಮಾಡೆಲ್ ಹೇಳಿದ್ದೇನು?