ಸಿ.ಟಿ.ರವಿ ಅರೆಸ್ಟ್: ಸುವರ್ಣ ಸೌಧದಲ್ಲೇ ಬಂಧಿಸಿದ ಪೊಲೀಸರು

c t ravi
19/12/2024

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದ ಬಳಸಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯನ್ನು ಬಂಧಿಸಲಾಗಿದೆ.

ಬೆಳಗಾವಿಯ ಹೀರೇಬಾಗೇವಾಡಿ ಪೊಲೀಸರು ಸುವರ್ಣ ಸೌಧದಲ್ಲೇ ಸಿ.ಟಿ.ರವಿಯನ್ನು ಬಂಧಿಸಿದರು. ಇಬ್ಬರು ಎಸ್ ಪಿ ರಾಂಕ್ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್ ಗಳು ಹಾಗೂ ಎರಡು ಕೆಎಸ್ ಆರ್ ಪಿ ತುಕಡಿಗಳ ಭದ್ರತೆಯಲ್ಲಿ ಸಿ.ಟಿ.ರವಿಯನ್ನು ಬಂಧಿಸಿ ಕರೆದೊಯ್ಯಲಾಗಿದೆ.

ಪೊಲೀಸರು ಮುಂಜಾಗೃತಾ ಕ್ರಮವಾಗಿ ಸಿ.ಟಿ.ರವಿ ಅವರನ್ನು ಬಂಧಿಸಿ ನಂದಗಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ ಎಂದು ವರದಿಯಾಗಿದೆ.

ಹೀರೇಬಾಗೇವಾಡಿ ಠಾಣೆಯಲ್ಲಿ  ಸಿ.ಟಿ.ರವಿ ವಿರುದ್ಧ ಬಿಎನ್ ಎಸ್ ಕಾಯ್ದೆ 75 ಮತ್ತು 79 ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು, ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version