ಭಿಕ್ಷಾಟನೆ ಮೂಲಕ ಪಡಿ ಸಂಗ್ರಹ ಮಾಡಿದ ಸಿ.ಟಿ. ರವಿ
13/12/2024
ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಮಾಲಾಧಾರಿ ಸಿ.ಟಿ.ರವಿ ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹ ಮಾಡಿದರು.
ಸಿ.ಟಿ.ರವಿ ಸೇರಿ ಮಾಲಾಧಾರಿಗಳಿಂದ ಭಿಕ್ಷಾಟನೆ ನಡೆಸಿದರು. ನಾರಾಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ನಡೆಸಲಾಯಿತು. ಮನೆ–ಮನೆಗಳಿಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ನಡೆಸಲಾಯಿತು.
ಪಡಿ ರೂಪದಲ್ಲಿ ಸ್ಥಳೀಯರು ಅಕ್ಕಿ, ಬೆಲ್ಲ, ಕಾಯಿ ನೀಡುತ್ತಿದ್ದಾರೆ. ದತ್ತ ಭಜನೆಯೊಂದಿಗೆ ಮನೆಮನೆಗೆ ತೆರಳಿ ಪಡಿ ಸಂಗ್ರಹ ನಡೆಸಲಾಗುತ್ತಿದೆ. ಸಂಗ್ರಹಿಸಲಾದ ಪಡಿಯನ್ನ ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯರಿಗೆ ಮಾಲಾಧಾರಿಗಳು ಅರ್ಪಿಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: