ಕನ್ನಡ ರಾಜ್ಯೋತ್ಸವದ ವೇಳೆ ಸಿ.ಟಿ.ರವಿಗೆ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನ: ದಲಿತ ಮುಖಂಡರ ಬಂಧನ
ಚಿಕ್ಕಮಗಳೂರು: ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ, ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಪ್ರದರ್ಶಿಸಿ ಜಿಲ್ಲಾಡಳಿತ ಹಾಗೂ ಸಿ.ಟಿ.ರವಿ ವಿರುದ್ಧ ಪ್ರತಿಭಟನೆಗೆ ಮುಂದಾದರು.
67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆದಿದ್ದು, ಈ ವೇಳೆ ಜಿಲ್ಲಾಡಳಿತ ಹಾಗೂ ಶಾಸಕ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿ ಕಪ್ಪು ಪಟ್ಟಿ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ 20ಕ್ಕೂ ಹೆಚ್ಚು ದಲಿತ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕಳೆದ ನಾಲ್ಕೈದು ದಿನಗಳಿಂದ ನಗರದ ಆಜಾದ್ ಪಾರ್ಕ್ ಬಳಿ, ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ತೋಟದ ಮಾಲೀಕನನ್ನು ಇನ್ನೂ ಕೂಡ ಬಂಧಿಸದ ಕಾರಣ ಕಾರ್ಯಕರ್ತರು ಜಿಲ್ಲಾಡಳಿತ ಹಾಗೂ ಸಿ.ಟಿ.ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಿ.ಟಿ.ರವಿ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka