ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ವಿರೋಧ

ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಮ್ಮ ತೃಣಮೂಲ ಕಾಂಗ್ರೆಸ್ ಪಕ್ಷ ಏಕರೂಪ ನಾಗರಿಕ ಸಂಹಿತೆಯನ್ನು ಅನುಮತಿಸುವುದಿಲ್ಲ’ ಎಂದು ಹೇಳಿದ್ದಾರೆ.
ಈದ್-ಉಲ್-ಫಿತರ್ ಸಂದರ್ಭದಲ್ಲಿ ಕೋಲ್ಕತ್ತಾದ ಮಸೀದಿಯಲ್ಲಿ ಮುಸ್ಲಿಂ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಾವು ದೇಶಕ್ಕಾಗಿ ರಕ್ತ ಹರಿಸಲು ಸಿದ್ಧರಿದ್ದೇವೆ. ಆದರೆ, ದೇಶಕ್ಕಾಗಿ ಚಿತ್ರಹಿಂಸೆಯನ್ನು ಸಹಿಸುವುದಿಲ್ಲ. ಯುಸಿಸಿ ಸ್ವೀಕಾರಾರ್ಹವಲ್ಲ; ನಾನು ಎಲ್ಲ ಧರ್ಮಗಳಲ್ಲಿ ಸಾಮರಸ್ಯವನ್ನು ಬಯಸುತ್ತೇನೆ. ನಾವು ಸಿಎಎ, ಎನ್ ಆರ್‌ಸಿ ಅಥವಾ ಯುಸಿಸಿಯನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಅವರು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಈ ವರ್ಷದ ಆರಂಭದಲ್ಲಿ ಸಿಎಎ ಅನುಷ್ಠಾನವನ್ನು ಘೋಷಿಸಿತು. ಜೊತೆಗೆ ಯುಸಿಸಿಯು ಬಿಜೆಪಿಯ ಅಜೆಂಡಾದಲ್ಲಿ ಬಹಳ ಹಿಂದಿನಿಂದಲೂ ಇದೆ. ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು ರಾಜ್ಯದಲ್ಲಿ ಯುಸಿಸಿಯನ್ನು ಪರಿಚಯಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth