3ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ರದ್ದು!
ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಮಾಡಿಸಿಕೊಂಡಿರುವ 3ಲಕ್ಷಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈ ಮೂಲಕ ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ನೀಡಿದೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
ಆಹಾರ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯಾದ್ಯಂತ 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 3,08,345 ಬಿಪಿಎಲ್ ಕಾರ್ಡ್ ಮತ್ತು 21,679 ಅಂತ್ಯೋದಯ ಕಾರ್ಡ್ ಗಳಿವೆ. ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw