ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ರದ್ದುಪಡಿಸಿರುವುದು ಖಂಡನೀಯ: ಎಂ. ಪಿ.ಮೊಯಿದಿನಬ್ಬ - Mahanayaka

ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿ ರದ್ದುಪಡಿಸಿರುವುದು ಖಂಡನೀಯ: ಎಂ. ಪಿ.ಮೊಯಿದಿನಬ್ಬ

udupi
25/03/2023

ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಪಡಿಸಿದ ರಾಜ್ಯ ಸರ್ಕಾರದ ತೀರ್ಮಾನ ಅತ್ಯಂತ ಖಂಡನೀಯ. ಸರ್ಕಾರ ಕೂಡಲೇ ಈ ತೀರ್ಮಾನ ವನ್ನು ಹಿಂಪಡೆಯಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಅವರು ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಪ್ರವರ್ಗ 2ಬಿ ಅಡಿಯಲ್ಲಿ ಇದ್ದ ಶೇಕಡಾ 4 ಮೀಸಲಾತಿ ಯನ್ನು ಹಿಂಪಡೆದು ಇನ್ನೊಂದು ಸಮುದಾಯಕ್ಕೆ ನೀಡುವ ಮೂಲಕ ರಾಜ್ಯ ಸರ್ಕಾರ ವು ಸಮುದಾಯಗಳ ನಡುವೆ ದ್ವೇಷದ ಕಿಡಿ ಹೊತ್ತಿಸಿ ಮುಂದಿನ ಚುನಾವಣೆಯಲ್ಲಿ ಮತ ಗಳಿಸುವ ಕೆಟ್ಟ ಯೋಚನೆ ಮಾಡಿದೆ ಎಂದು ಮೊಯಿದಿನಬ್ಬ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ