ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ: ದೇಶದಲ್ಲಿ ಒತ್ತಾಯಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಹೇಳಿದೆ.
ಈವರ ಫೌಂಡೇಶನ್ ಎಂಬ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯಲ್ಲಿ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ವಿವರಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.
ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ.
ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನೂ ಹೇರಿಲ್ಲ. ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನ ವಿರುದ್ಧ ಹೋರಾಡುವಂತೆ ಸೂಚಿಸಲಾಗಿದೆ. ಆದರೆ ಯಾರಿಗೂ ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಖ್ಯಾತ ಕಥಕ್ ನೃತ್ಯಗಾರ ಪಂಡಿತ್ ಬಿರ್ಜು ಮಹಾರಾಜ್ ಹೃದಯಾಘಾತದಿಂದ ನಿಧನ
ಶಬರಿಮಲೆ ಬೆಟ್ಟ ಹತ್ತುತ್ತಿದ್ದ ವೇಳೆ ಅಯ್ಯಪ್ಪ ಮಾಲಾಧಾರಿ ಹೃದಯಾಘಾತದಿಂದ ಸಾವು
ಕೊರೊನಾ ಗೊಣ್ಣೆ ಸುರಿಸುವ ವೈರಸ್ ಅಷ್ಟೆ… ಇದೊಂದು ಮೆಡಿಕಲ್ ಮಾಫಿಯಾ | ಡಾ.ಟಿ.ಹೆಚ್.ಆಂಜನಪ್ಪ