ಚರ್ಮಗಂಟು ರೋಗ: ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟಕ್ಕೆ ನಿಷೇಧ - Mahanayaka
8:57 AM Thursday 12 - December 2024

ಚರ್ಮಗಂಟು ರೋಗ: ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟಕ್ಕೆ ನಿಷೇಧ

charma ganturoga
30/12/2022

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ.

ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ