ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ
ಗದಗ: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ.
ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಈ ವಿದ್ಯಾರ್ಥಿಗಳು ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅತೀಯಾದ ವೇಗದಲ್ಲಿ ವಾಹನ ಚಲಾಯಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: